ಯತೀಂದ್ರ ವಿಡಿಯೋ ವಿಚಾರ: ‘ವರ್ಗಾವಣೆ ದಂಧೆ ಸಾಬೀತಾದರೆ ರಾಜಕೀಯ ನಿವೃತ್ತಿ’- ಸಿಎಂ
ಬೆಂಗಳೂರು : ಸಿಎಸ್ ಆರ್ ಫಂಡಿಂಗ್ ಬಗ್ಗೆ ನನ್ನ ಪುತ್ರ ಯತೀಂದ್ರ ಪ್ರಸ್ತಾಪಿಸಿದ್ದು, ಆರೋಪ ಸತ್ಯವಾದರೆ ರಾಜಕೀಯ ನಿವೃತ್ತಿ ನೀಡುವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪುತ್ರನ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯತೀಂದ್ರ ಸಿದ್ದರಾಮಯ್ಯ ಮೊಬೈಲ್ ನಲ್ಲಿ ಮಾತನಾಡಿರುವ ವಿಡಿಯೊ ಮಾಧ್ಯಮಗಳಲ್ಲಿ ತೀವ್ರ ಸುದ್ದಿಯಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಶಾಲೆ ಕಟ್ಟಡಗಳನ್ನು ಕಟ್ಟಿಸುತ್ತಿದ್ದೇವೆ. ಅದಕ್ಕೆ ಸಿಎಸ್ ಆರ್ ಫಂಡ್ ಒದಗಿಸುವ ಬಗ್ಗೆ ಮಾತನಾಡಿದ್ದಾರೆ ಹೊರತು ವರ್ಗಾವಣೆ ಬಗ್ಗೆ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ದಂಧೆ, ಹಗರಣಗಳಲ್ಲಿ ಭಾಗಿಯಾಗಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕಾಗಿ ಏನೆಲ್ಲಾ ಆರೋಪ ಮಾಡಬಹುದು, ಮಾಡಿಕೊಳ್ಳಲಿ, ಕುಮಾರಸ್ವಾಮಿ ಆರೋಪಗಳ ಬಗ್ಗೆ ಬೇಕಾದರೆ ತನಿಖೆ ಮಾಡಿಕೊಳ್ಳಲಿ, ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಸವಾಲು ಹಾಕಿದರು.