ರಸ್ತೆ ಅಪಘಾತ: ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು .!
ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪಿಎ ಈಶ್ವರ ಬೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೀಕರ ಬೈಕ್ ಅಪಘಾತದಲ್ಲಿ ಶಾಸಕರ ಪಿಎ ಈಶ್ವರ ಮೃತಪಟ್ಟಿದ್ದಾರೆ. ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್ನಲ್ಲಿದ್ದ ಶಾಸಕರ ಆಪ್ತ ಸಹಾಯಕ ಈಶ್ವರ ಮೃತಪಟ್ಟಿದ್ದಾರೆ. ಪ್ರಕರಣವನ್ನು ಪೋಲಿಸರು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ಬರಬೇಕಿದೆ.!