Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಸ್ತೆ ನಿರ್ಮಾಣದ ಬಗ್ಗೆ ಸರ್ಕಾರದಿಂದ ಹೊಸ ನಿಯಮ ಜಾರಿ: ಜಾರಕಿಹೊಳಿ

 

ಬೆಂಗಳೂರು: ರಾಜ್ಯದಲ್ಲಿ ರಸ್ತೆ ನಿರ್ಮಾಣ ಹಾಗೂ ನಿರ್ವಹಣೆ ಬಗ್ಗೆ ಹೊಸದಾಗಿ ನಿಯಮ ಜಾರಿ ಮಾಡಲಿದ್ದೇವೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿ, ರಾಜ್ಯದಲ್ಲಿ ರಸ್ತೆ ನಿರ್ಮಿಸುವ ಗುತ್ತಿಗೆದಾರರೇ 5 ವರ್ಷದ ವರೆಗೆ ಆ ರಸ್ತೆಗಳನ್ನು ನಿರ್ವಹಣೆ ಮಾಡಬೇಕು. ಹಿಂದೆ ಈ ನಿಯಮ ಇರಲಿಲ್ಲ, ಈಗ ಜಾರಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಅಲ್ಲದೆ, ಲೋಕೋಪಯೋಗಿ ಇಲಾಖೆಯಲ್ಲಿ ಆ್ಯಪ್ ಸಹ ಸಿದ್ಧವಾಗುತ್ತಿದ್ದು, ಇದು ಬಿಡುಗಡೆಯಾದರೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.