Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜಕೀಯಕ್ಕೆ ಸಮಂತಾ ಎಂಟ್ರಿ?

ಮುಂಬೈ:ಟಾಲಿವುಡ್ ನಟಿ ಸಮಂತಾ ಸದ್ಯ ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ‘ಖುಷಿ’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಈ ಮಧ್ಯೆ ಸಮಂತಾ ರಾಜಕೀಯಕ್ಕೆ ಎಂಟ್ರಿ ಕೊಡುವತ್ತ ಗಮನ ಹರಿಸುತ್ತಿದ್ದಾರೆ ಎನ್ನುವ ಬಗ್ಗೆ ಚಿತ್ರರಂಗದಲ್ಲಿ ಚರ್ಚೆ ಶುರುವಾಗಿದೆ.

ಅನಾರೋಗ್ಯದ ಹಿನ್ನಲೆ ಸಿನಿಮಾದಿಂದ ಬ್ರೇಕ್ ಪಡೆದುಕೊಂಡಿರುವ ಸಮಂತಾ ಈಗ ರಾಜಕೀಯಕ್ಕೆ ಎಂಟ್ರಿ ಕೊಡುವ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಚಿಕಿತ್ಸೆಯ ಜೊತೆಗೆ ರಾಜಕೀಯಕ್ಕೆ ಎಂಟ್ರಿ ಕೊಡುವ ಬಗ್ಗೆ ಸಮಂತಾ ಯೋಚಿಸಿದ್ದಾರಂತೆ. ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ನಾಯಕರು ಸಮಂತಾರನ್ನ ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ತಮ್ಮ ಪಕ್ಷದ ಪರವಾಗಿ ಪ್ರಚಾರ ಕಾರ್ಯಗಳಲ್ಲಿ ಭಾಗವಹಿಸಿ, ತಮ್ಮ ಪಕ್ಷದ ಬೆಂಬಲಕ್ಕೆ ನಿಲ್ಲಿ ಎಂದು ನಟಿಗೆ ಮನವಿ ಮಾಡಿದ್ದಾರೆ. ಮುಂದಿನ ಚುನಾವಣೆಗೆ ಸಮಂತಾ ಕೂಡ ಬಿಆರ್‍ಎಸ್ ಪಕ್ಷದ ಪರವಾಗಿ ಪ್ರಚಾರದ ಅಖಾಡಕ್ಕೆ ಇಳಿಯುತ್ತಾರೆ ಎನ್ನಲಾಗುತ್ತಿದೆ. ತೆಲಂಗಾಣದಲ್ಲೂ ಸ್ಯಾಮ್‍ಗೆ ಫ್ಯಾನ್ ಬೇಸ್ ದೊಡ್ಡ ಮಟ್ಟದಲ್ಲಿರುವ ಕಾರಣ ರಾಜಕೀಯ ಪಕ್ಷಕ್ಕೆ ಪ್ಲಸ್ ಆಗುತ್ತೆ ಎಂಬುದು ಲೆಕ್ಕಚಾರ.ಆದರೆ ಸಮಂತಾ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಉತ್ತರ ಸಿಗುವವೆರೆಗೂ ಕಾದುನೋಡಬೇಕಿದೆ.