Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜಸ್ಥಾನದಲ್ಲಿ ಬಸ್ ಪಲ್ಟಿ: ನಾಲ್ವರು ಸಾವು, ಹಲವರಿಗೆ ಗಾಯ

ರಾಜಸ್ಥಾನ: ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿದ ಸೇತುವೆ ಮೇಲಿಂದ ರೈಲ್ವೆ ಹಳಿ ಮೇಲೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಮತ್ತೆ ಕೆಲವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಇಂದು ಮುಂಜಾನೆಯ 2.15ಕ್ಕೆ  ವೇಳೆ ನಡೆದಿದೆ.

ಸುಮಾರು 30 ಪ್ರಯಾಣಿಕರನ್ನು ಹೊತ್ತ ಈ ಬಸ್ ಹರಿದ್ವಾರದಿಂದ ಉದಯಪುರಕ್ಕೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರ ಸಹಕಾರದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

“ಅಪಘಾತದ ನಂತರ, 28 ಜನರನ್ನು ಆಸ್ಪತ್ರೆಗೆ ಕರೆತರಲಾಯಿತು, ಅದರಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯ ಕುರಿತು ಹೆಚ್ಚಿನ ತನಿಖೆಗಾಗಿ ಎಸ್ ಡಿಎಮ್ ಅನ್ನು ಸ್ಥಳಕ್ಕೆ ಕಳುಹಿಸಲಾಗಿದೆ” ಎಂದು ದೌಸಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜ್ಕುಮಾರ್ ಕಸ್ವಾ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.