ರಾಜಸ್ಥಾನದ ನೂತನ ಸಿಎಂ ಆಗಿ ಭಜನ್ ಲಾಲ್ ಶರ್ಮಾ ಇಂದು ಪ್ರಮಾಣವಚನ
ಜೈಪುರ: ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಅಧಿಕೃತ ಆದೇಶದ ಪ್ರಕಾರ, ಜೈಪುರದ ರಾಯಲ್ ಆಲ್ಬರ್ಟ್ ಹಾಲ್ ಎದುರು ಬೆಳಗ್ಗೆ 11 ಗಂಟೆಗೆ ಪ್ರಮಾಚನ ಸಮಾರಂಭ ಆರಂಭವಾಗಲಿದ್ದು, ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಇದರೊಂದಿಗೆ ದಿಯಾ ಕುಮಾರಿ ಮತ್ತು ಪ್ರೇಮಚಂದ್ ಬೈರವ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ರಾಜಭವನದ ಸ್ಪಷ್ಟಪಡಿಸಿದೆ.
ಇನ್ನು ಈ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.