Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ ಡೆಂಗ್ಯೂ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು 10,500ರ ಗಡಿ ದಾಟಿದೆ. ಸಿಲಿಕಾನ್ ಸಿಟಿಯಲ್ಲಿ ಒಂದೇ ದಿನದಲ್ಲಿ ನೂರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಡಪಟ್ಟಿವೆ. ರಾಜ್ಯದಲ್ಲಿ ಸುಮಾರು 10,832ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಕೇಕೆ ಹೆಚ್ಚಾಗಿದೆ. ಬೆಂಗಳೂರು ಒಂದರಲ್ಲೇ 5,881ಕ್ಕೂ ಹೆಚ್ಚು ಡೆಂಗ್ಯೂ ‌ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 1ಲಕ್ಷಕ್ಕೂ ಹೆಚ್ಚು ಡೆಂಗ್ಯೂ ಶಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ 70 ಸಾವಿರ ಮಂದಿಗೆ ರಕ್ತದ ಸ್ಯಾಂಪಲ್ ಪರೀಕ್ಷೆಯಾಗಿದೆ. ಹತೋಟಿಗೆ ಸಿಗದೇ ಡೆಂಗ್ಯೂ ಹಾವಳಿ ಮುನ್ನುಗುತ್ತಿದೆ.