ರಾಜ್ಯದಲ್ಲಿ ಮತ್ತೆ ಹಿಂಗಾರು ಮಳೆ ಚುರುಕು
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುವ ಸಾಧ್ಯತೆಯಿದೆ. ಇಂದಿನಿಂದ 3 ದಿನ ಕರಾವಳಿ ಹಾಗೂ ಒಳನಾಡಿನಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಳಗಾವಿ, ಧಾರವಾಡ, ಬೆಂಗಳೂರು ಗ್ರಾ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು IMD ತಿಳಿಸಿದೆ. ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿದ್ದು, ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದೆ.