Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದಲ್ಲಿ 7ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ- ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.