ರಾಜ್ಯದ ಈ ಜಿಲ್ಲೆಗಳಲ್ಲಿ 5 ದಿನ ಮಳೆ
ಬೆಂಗಳೂರು; ರಾಜ್ಯದ ವಿವಿಧ ಪ್ರದೇಶಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನಾಳೆ ನಾಡಿದ್ದು, ಸಾಧಾರಣ ಮಳೆ ಸಾಧ್ಯತೆಯ ನಡುವೆ, ನ.15ರಿಂದ 5 ದಿನಗಳ ಕಾಲ ನಿರಂತರ ಮಳೆ ಸುರಿಯಲಿದೆ ಎಂದು ಅದು ಹೇಳಿದೆ.
ಚಾಮರಾಜನಗರ, ಬೆಂಗಳೂರು (ಗ್ರಾಮಾಂತರ), ಚಿಕ್ಕಬಳ್ಳಾಪುರ, ಹಾಸನ, ಕೊಡಗು,ಕೋಲಾರ, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ಮಳೆ ಸಾಧ್ಯತೆಯಿದೆ ಎಂದು ತಿಳಿಸಿದೆ.