Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದ ಬಹುತೇಕ ಈ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ.!

 

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ, 15ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಇನ್ನುಳಿದಂತೆ ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ದಾವಣಗೆರೆ,ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ.