Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯದ ವಕೀಲರಿಗೆ ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ

ನಾಳೆಯಿಂದ ಮೇ 31ರವರೆಗೆ ರಾಜ್ಯಾದ್ಯಂತ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ಹೈಕೋರ್ಟ್‌ ವಿನಾಯಿತಿ ನೀಡಿದೆ.

ವಕೀಲರು ಕಪ್ಪು ಕೋಟಿನ ಬದಲಿಗೆ ಶಾಂತ ಬಣ್ಣದ ಬಟ್ಟೆ ಧರಿಸಬಹುದು ಎಂದು ನ್ಯಾಯಾಲಯದ ರಿಜಿಸ್ಟ್ರಾರ್‌ ಭರತ್‌ ಕುಮಾರ್‌ ತಿಳಿಸಿದ್ದಾರೆ.

ಬಿಸಿಲು ಹೆಚ್ಚಾಗಿರುವ ಕಾರಣ ಕಪ್ಪು ಕೋಟು ಧರಿಸಿ ಬರುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತದೆ.

ಹೀಗಾಗಿ ತಾತ್ಕಾಲಿಕವಾಗಿ ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷರ ಮನವಿ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.