Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ

ಬೆಂಗಳೂರು: ನಕಲಿ ಫೇಸ್‌ಬುಕ್‌ ಸೃಷ್ಟಿಸುವವರು ರಾಜ್ಯದ ಪ್ರಥಮ ಪ್ರಜೆಯನ್ನು ಬಿಟ್ಟಿಲ್ಲ. ಕರ್ನಾಟಕ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಹೆಸರು ಬಳಸಿಕೊಂಡು ನಕಲಿ ಫೇಸ್​ಬುಕ್ ಖಾತೆ ಓಪನ್ ಮಾಡಲಾಗಿದೆ.

ನಕಲಿ ಫೇಸ್‌ಬುಕ್‌ ಸೃಷ್ಟಿಸುವವರು ರಾಜ್ಯದ ಪ್ರಥಮ ಪ್ರಜೆಯನ್ನು ಬಿಟ್ಟಿಲ್ಲ. ಕರ್ನಾಟಕ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಹೆಸರು ಬಳಸಿಕೊಂಡು ನಕಲಿ ಫೇಸ್​ಬುಕ್ ಖಾತೆ ಓಪನ್ ಮಾಡಲಾಗಿದೆ.

ರಾಜ್ಯಪಾಲರ ಫೋಟೋ, ಹೆಸರು ಬಳಸಿ ಫೇಸ್​ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಗಮನಕ್ಕೆ ಬರುತ್ತಿದ್ದಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್​ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ