Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯ ಬಜೆಟ್ ಮಂಡನೆ: ಮದ್ಯ ಪ್ರಿಯರಿಗೆ ಶಾಕ್- ಅಬಕಾರಿ ತೆರಿಗೆ ಹೆಚ್ಚಳ

ಬೆಂಗಳೂರು: ಆರ್ಥಿಕ ಸಚಿವರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು 14ನೇ ಸಲ ರಾಜ್ಯದ ಬಜೆಟ್‌ ಮಂಡಿಸುತ್ತಿದ್ದು, ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದ್ದು, ಇದರಿಂದ ಬಿಯರ್​ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.

ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್​ನಲ್ಲಿ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದ್ದು, ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ.

ಸಿದ್ದು ಬಜೆಟ್: ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಹಣ?; ಮಾಹಿತಿ ಇಲ್ಲಿದೆ

ಇನ್ನು 3.24 ಲಕ್ಷ ಕೋಟಿ ರೂ. ಮೌಲ್ಯದ ಬಜೆಟ್‌ ಮಂಡಿಸುತ್ತಿದ್ದು, ಸರ್ವ ಜನಾಂಗದ ಶಾಂತಿಯ ತೋಟ, ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ತತ್ವದಲ್ಲಿ ಬಜೆಟ್‌ ಮಂಡಿಸುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.