Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯ ಸರ್ಕಾರಕ್ಕೆ ಯುನೆಸ್ಕೋ ನೋಟಿಸ್..!

 

ಬೆಂಗಳೂರು: ಯುನೆಸ್ಕೋ ವಿಶ್ವ ಪರಂಪರೆಯ ತಾಣ ಹಂಪಿ ವಿರೂಪಾಕ್ಷ ದೇವಸ್ಥಾನದಲ್ಲಿ ಐತಿಹಾಸಿಕ ಕಂಬವನ್ನು ಕೊರೆದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI), ರಾಜ್ಯದ ದತ್ತಿ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.

ಕೆಲ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಇಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಧ್ವಜ ಕಟ್ಟಲು ಐತಿಹಾಸಿಕ ಕಂಬದಲ್ಲಿ ರಂಧ್ರ ಕೊರೆಯಲಾಗಿದೆ. ಇದಕ್ಕೆ ರಾಜ್ಯ ಸರ್ಕಾರ ಯಾವುದೇ ಅನುಮತಿ ಪಡೆದಿರಲಿಲ್ಲ ಎಂದು ವರದಿಯಾಗಿತ್ತು.