Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದು ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಇಂದು ಕೋಲಾರದಲ್ಲಿ ಬಿಜೆಪಿ ಬೃಹತ್‌ ಪ್ರತಿಭಟನೆ ಹಮ್ಮಿಕೊಂಡಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಜನತಾ ದರ್ಶನದಲ್ಲಿ ಸಂಸದ ಮುನಿಸ್ವಾಮಿಗೆ ಅವಮಾನ, ಕ್ಲಾಕ್‌ ಟವರ್‌ನಲ್ಲಿ ತಲ್ವಾರ್‌ ದ್ವಾರ ನಿರ್ಮಿಸಲು ಅನುಮತಿ ನೀಡಿರುವುದನ್ನು ಹಾಗೂ ರೈತರ ಮೇಲಿನ ದೌರ್ಜನ್ಯ ಖಂಡಿಸಿ, ಬಿಜೆಪಿ ನಾಯಕರು ಧರಣಿ ನಡೆಸಲಿದ್ದಾರೆ. ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಗಾಂಧಿ ವೃತ್ತದವರೆಗೂ ಧರಣಿ ನಡೆಯಲಿದೆ.

ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮಾಜಿ ಸಿಎಂ ಸದಾನಂದಗೌಡ, ಮಾಜಿ ಸಚಿವರಾದ ಸಿಎನ್‌ ಅಶ್ವತ್ಥನಾರಾಯಣ, ಕೆಎಸ್‌ ಈಶ್ವರಪ್ಪ, ಸಿಟಿ ರವಿ, ಸಂಸದರಾದ ಪ್ರತಾಪ್‌ ಸಿಂಹ, ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ.