ರಾಮಲಲ್ಲಾನ ಪ್ರತಿಷ್ಠಾಪನೆ ರಜೆ ಘೋಷಣೆ, ಮದ್ಯ ಮಾರಾಟ ನಿಷೇಧ!
ಉತ್ತರಪ್ರದೇಶ : ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ಜರುಗಲಿದ್ದು, ಜ. 22ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಕೇಳಿಬರುತ್ತಿದೆ.
ಈ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರ ಅಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಿದೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ನಿಮಿತ್ತ ಅಂದು ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಇಡೀ ದಿನ ಮದ್ಯ ಮಾರಾಟ ಕೂಡ ಬಂದ್ ಆಗಿರಲಿದೆ ಎಂದು ಸಿಎಂ ಯೋಗಿ ತಿಳಿಸಿದ್ದಾರೆ. ಅಲ್ಲದೆ, ಸರ್ಕಾರಿ ಕಟ್ಟಡಗಳ ಅಲಂಕಾರಕ್ಕೂ ಸೂಚಿಸಿದ್ದಾರೆ.