Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಮಲಲ್ಲಾ ದರ್ಶನ: ಒಂದೇ ದಿನಕ್ಕೆ 3.17 ಕೋಟಿ ದೇಣಿಗೆ ಸಂಗ್ರಹ.!

 

ಅಯೋಧ್ಯೆ: ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಾದ ಮರುದಿನ ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹವಾಗಿದೆ. ಬುಧವಾರ 2.5 ಲಕ್ಷ ಜನ ಬಾಲರಾಮನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯ ಸರ್ಕಾರ ಹೊರಡಿಸಿದ ಪತ್ರಿಕಾ ಹೇಳಿಕೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕುಮಾರ್ ಅವರು, ಪ್ರಾಣ ಪ್ರತಿಷ್ಠಾಪನೆಯಾದ ನಂತರದ ಎರಡನೇ ದಿನವಾದ ಬುಧವಾರ ರಾತ್ರಿ 10 ಗಂಟೆಯವರೆಗೆ 2.5 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ಮೊದಲ ದಿನವೇ 5 ಲಕ್ಷಕ್ಕೂ ಹೆಚ್ಚು ಜನರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದರು.

ದೇವಾಲಯದಲ್ಲಿ ತೆರೆಯಲಾದ 10 ಕೌಂಟರ್ಗಳಲ್ಲಿ ಮತ್ತು ಆನ್ಲೈನ್ ಮೂಲಕ ಭಕ್ತರು ಪ್ರಾಣ ಪ್ರತಿಷ್ಠಾಪನೆಯಾದ ಮರುದಿನ ಒಂದೇ ದಿನದಲ್ಲಿ ಒಟ್ಟು ₹3.17 ಕೋಟಿ ದೇಣಿಗೆ ನೀಡಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಟ್ರಸ್ಟಿ ಅನಿಲ್ ಮಿಶ್ರಾ ಹೇಳಿದ್ದಾರೆ.