ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನ ಹುಟ್ಟಿದ ಮಗುವಿಗೆ ರಾಮ್ ರಹೀಂ ನಾಮಕರಣ
ಉತ್ತರ ಪ್ರದೇಶ:ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದ ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ದಿನದಂದು ಹುಟ್ಟಿದ ಮಗುವಿಗೆ ಮುಸ್ಲಿಂ ದಂಪತಿ ರಾಮ್ ರಹೀಂ ಎಂದು ನಾಮಕರಣ ಮಾಡಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.
ಸೋಮವಾರ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಡೆಯುತ್ತಿದ್ದಾಗ ಫರ್ಜಾನಾ ಎಂಬ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಇನ್ನು ಮಗು ಮತ್ತು ತಾಯಿ ಇಬ್ಬರೂ ಕ್ಷೇಮವಾಗಿದ್ದಾರೆ ಎಂದು ಜಿಲ್ಲಾ ಮಹಿಳಾ ಆಸ್ಪತ್ರೆಯ ಪ್ರಭಾರಿ ಡಾ.ನವೀನ್ ಜೈನ್ ತಿಳಿಸಿದ್ದಾರೆ.
ಮಗುವಿನ ಅಜ್ಜಿ ಹುಸ್ನಾ ಬಾನು ಅವರು ಮೊಮ್ಮಗನಿಗೆ ರಾಮ್ ರಹೀಂ ಎಂದು ಹೆಸರಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ಹಿಂದೂ-ಮುಸ್ಲಿಂ ಏಕತೆಯ ಸಂದೇಶ ನೀಡಲು ಮಗುವಿಗೆ ರಾಮ್ ರಹೀಂ ಎಂದು ಹೆಸರಿಟ್ಟಿದ್ದೇನೆ ಎಂದು ಬಾನು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.