Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ರಾಹುಲ್ ಗಾಂಧಿಗೆ ಬಿಗ್ ರಿಲೀಫ್: ಶಿಕ್ಷೆಗೆ ತಡೆ ನೀಡಿದ ಸುಪ್ರೀಂ

ಪ್ರಧಾನಿ ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 2 ವರ್ಷ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪ್ರಧಾನಿ ಮೋದಿ ಉಪನಾಮ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಸಂಕಷ್ಟವನ್ನುಂಟು ಮಾಡಿತ್ತು. ಸೂರತ್ ಶಾಸಕ ಪೂರ್ಣೇಶ್ ಮೋದಿ ದಾಖಲಿಸಿದ್ದ ಪ್ರಕರಣದಲ್ಲಿ ಸೂರತ್ ನ್ಯಾಯಾಲಯ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಈ ಕಾರಣಕ್ಕಾಗಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಕಳೆದುಕೊಂಡಿದ್ದರು ಈ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿದ್ದ ತೀರ್ಪಿಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿತ್ತು, ನಂತರ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಕರ್ನಾಟಕದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮೋದಿ ಹೆಸರಿನವರೆಲ್ಲ ಮೋಸಗಾರರೇ ಆಗಿರುತ್ತಾರಲ್ಲ ಏಕೆ ಎಂದು ರಾಹುಲ್ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಗುಜರಾತ್ ಶಾಸಕ ಪೂರ್ಣೇಶ್ ಮೋದಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.