ರೇವಣ್ಣ ಆಪ್ತ ಕೃಷ್ಣೇಗೌಡ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಹಾಸನ: ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ತಿಂಗಳ ಬಳಿಕ ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯೋಗಾನಂದ(38), ಅನಿಲ್(32) ಬಂಧಿತ ಪ್ರಮುಖ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿ ಯೋಗಾನಂದ ಎಂಬಾತ ಕೃಷ್ಣೇಗೌಡ ಅವರನ್ನು ಹಣಕಾಸು ವಿಚಾರದಲ್ಲಿನ ವೈಷಮ್ಯ ಹಿನ್ನೆಲೆ ಸುಫಾರಿ ಕೊಟ್ಟು ಹತ್ಯೆ ಮಾಡಿಸಿದ್ದ. ಆರೋಪಿಗಳು ತುಮಕೂರು ಜಿಲ್ಲೆಯ ತುರುವೇಕರೆ ಬಳಿ ತೋಟದ ಮನೆಯಲ್ಲಿ ಮಂಗಳವಾರ ಅಡಗಿಕೊಂಡಿದ್ದರು. ಆರೋಪಿಗಳಿಬ್ಬರನ್ನು ಹಾಸನ ಹಾಗೂ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಹಾಸನ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಹತ್ಯೆಗೆ ಸಂಬಂಧಿಸಿದಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.