ಲಂಚಪಡೆಯುವ ಸಿಕ್ಕಿಬಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು.!
ಯಾದಗಿರಿ: ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದ ಶಿಕ್ಷಣ ಇಲಾಖೆ ಅಧಿಕಾರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಯಾದಗಿರಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಬಸವರಾಜ ಇನಾಮಾದಾರ ಅವರು ಶಿಕ್ಷೆಗೆ ಒಳಗಾದವರು. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ವಿಚಾರಣೆ ನಡೆಸಿದ ವಿಶೇಷ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಎ.ಸ್ ರೇಖಾ ಅವರು ಶಿಕ್ಷಣಾಧಿಕಾರಿ ವೆಂಕಯ್ಯರಿಗೆ ಒಂದು ವರ್ಷ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.