ಲಕ್ನೋ :ಭೀಕರ ರಸ್ತೆ ಅಪಘಾತಕ್ಕೆ 5 ಮಂದಿ ಸಜೀವ ದಹನ
ಲಕ್ನೋ : ಉತ್ತರ ಪ್ರದೇಶದ ಮಥುರಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಕನಿಷ್ಠ ಐವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮಥುರಾದ ಮಹಾವನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ನಂತರ ಅದೇ ಮಾರ್ಗವಾಗಿ ಬರುತ್ತಿದ್ದ ಬಸ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿದ್ದ ಐವರು ಸುಟ್ಟು ಕರಕಲಾಗಿದ್ದಾರೆ. ಆದ್ರೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಅಗ್ನಿಗೆ ಆಹುತಿಯಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದೆ. ಅಪಘಾತಕ್ಕೀಡಾದ ಬಸ್ ಆಗ್ರಾದಿಂದ ನೋಯ್ಡಾಗೆ ತೆರಳುತ್ತಿತ್ತು.