Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಲೋಕಾಯುಕ್ತ ಬಲೆಗೆ ಬಿದ್ದ ಬೆಂಗಳೂರು ಬಿಬಿಎಂಪಿ ಎಆರ್‌ಒ

ಬೆಂಗಳೂರು: ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ಬಿಬಿಎಂಪಿ ಎಆರ್‌ಒ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಎಆರ್ ಒ ಚಂದ್ರಪ್ಪ ಅವರು ಖಾತೆ ಮಾಡಿಕೊಡಲು 60,000 ಲಂಚಕ್ಕೆ ಬೇಡಿಕೆ ಇಟ್ಟಿದ್ದು, 10,000 ರೂಪಾಯಿ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.

ಇನ್ನು ಇದೇ ವೇಳೆ ಚಂದ್ರಪ್ಪ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆದಿದ್ದು, ಬೆಂಗಳೂರಿನ ಕೆ.ಆರ್.ಪುರಂ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.