Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಕ್ಫ್‌ ಮಂಡಳಿ ಅಧ್ಯಕ್ಷ ಶಾಫಿ ಸಅದಿ ರಾಜೀನಾಮೆ

ಬೆಂಗಳೂರು: ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್‌ಕೆ ಶಾಫಿ ಸಅದಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಡಾ.ಮುಹಮ್ಮದ್ ಯೂಸುಫ್ ನಿಧನದ ಬಳಿಕ ಒಂದು ವರ್ಷ ವಕ್ಫ್ ಬೋರ್ಡ್‍ಗೆ ಅಧ್ಯಕ್ಷರ ಆಯ್ಕೆಯಾಗಿರಲಿಲ್ಲ. ಆನಂತರ ಬಿಜೆಪಿ ಸರಕಾರ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಅಧಿಸೂಚನೆ ಹೊರಡಿಸಿತು. ಈ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯ ಶಾಫಿ ಸಅದಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕಾಂಗ್ರೆಸ್‌ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಮೇ 22 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಒಂದೇ ದಿನದಲ್ಲಿ ಈ ಆದೇಶವನ್ನು ರದ್ದುಗೊಳಿಸಲಾಗಿತ್ತು.

ಕರಾವಳಿ ಸೇರಿದಂತೆ ರಾಜ್ಯದ 13ಕ್ಕೂ ಅಧಿಕ ಜಿಲ್ಲೆಗಳಲ್ಲಿ ಜುಲೈ 10ರವರೆಗೂ ಮಳೆ

ಸುಮಾರು ಎರಡು ಕೋಟಿ ರೂ.ವೆಚ್ಚದಲ್ಲಿ ನವೀಕೃತಗೊಂಡಿರುವ ವಕ್ಫ್ ಬೋರ್ಡ್ ಕಚೇರಿಯ ಕಟ್ಟಡದ ಉದ್ಘಾಟನೆವರೆಗೆ ತಮ್ಮನ್ನು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಶಾಫಿ ಸಅದಿ ಮನವಿ ಮಾಡಿದ್ದುಅದರಂತೆ, ಜು.3ರಂದು ನವೀಕೃತ ಕಟ್ಟಡ ಉದ್ಘಾಟನೆಯಾಗಿದ್ದು, ಈ ಹಿನ್ನಲೆಯಲ್ಲಿ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.