ವಚನ : -ಹಡಪದ ಅಪ್ಪಣ್ಣ
ಸ್ವತಂತ್ರ ಲಿಂಗಾಯತ ಧರ್ಮದ ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ, ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.
https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.
ವಚನ: :
ಲಿಂಗವನರಿತು ಅಂಗ ಲಯವಾಗಬೇಕು.
ಅಂಕುರ ತೋರಿ ಬೀಜ ನಷ್ಟವಾದಂತೆ,
ಸ್ವಯಂಭು ತೋರಿ ಪ್ರತಿಷ್ಠೆ ನಷ್ಟವಾದಂತೆ,ಅರ್ಕೇಶ್ವರಲಿಂಗವ ಅರಿದ ಗೊತ್ತಿನ ಒಲುಮೆ.
-ಮಧುವಯ್ಯ ನಿಷ್ಠೆಯ ಮರೆದರೇನಯ್ಯಾ ?
ಲೋಕದ ಮನುಜರ ದೃಷ್ಟಿಗೆ ಸಿಲ್ಕಿ ಭ್ರಷ್ಟೆದ್ದುಹೋದರು.
ತನು ಕಷ್ಟಮಾಡಿದರೇನಯ್ಯಾ ಮನ ನಿಷ್ಠವಾಗದನ್ನಕ್ಕ ?
ತನು ಮನವೆರಡು ನಷ್ಟವಾಗಿ, ಘನವ ನೆಮ್ಮಿ,
ನಿಮ್ಮ ನೆನಹು ನಿಷ್ಪತ್ತಿಯಾದ ಶರಣರ
ಎನಗೊಮ್ಮೆ ತೋರಯ್ಯ, ನಿಮ್ಮ ಧರ್ಮ,ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
-ಹಡಪದ ಅಪ್ಪಣ್ಣ