ವಡೋದರಾದಲ್ಲಿ ದೋಣಿ ಮುಳುಗಡೆ – ವಿದ್ಯಾರ್ಥಿಗಳು ಸೇರಿ 14 ಮಂದಿ ಮೃತ್ಯು
ವಡೋದರಾ: ಗುಜರಾತ್ನ ವಡೋದರಾದ ಹರಣಿ ಸರೋವರದಲ್ಲಿ ದೋಣಿ ಮುಳುಗಿ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು, ಘಟನೆಯ ನಂತರ ಅಗ್ನಿಶಾಮಕ ದಳ ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದೆ.
ಇನ್ನು ವಡೋದರಾದ ಹರಣಿ ಸರೋವರದಲ್ಲಿ ಮಕ್ಕಳನ್ನು ಸಾಗಿಸುತ್ತಿದ್ದ ದೋಣಿ ಮುಳುಗಿದ ದುರಂತ ರಕ್ಷಿಸಲ್ಪಟ್ಟ ಮಕ್ಕಳನ್ನು ತಕ್ಷಣವೇ ಸಯಾಜಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಈ ದುರಂತ ಘಟನೆಯ ನಂತರ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸಂತಾಪ ವ್ಯಕ್ತಪಡಿಸಿದ್ದಾರೆ.