ವರುಣಾರ್ಭಟ: ಇಂದು ಈ ಐದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಕೆಲವೆಡೆ ವರುಣನ ಆರ್ಭಟ ಮುಂದುವರಿದಿದ್ದು, ಕರಾವಳಿ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದೆ. ಕಳೆದ ನಾಲ್ಕು ದಿನದಿಂದ ಮಳೆಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇನ್ನು ಜಿಲ್ಲೆಗಳ ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹೀಗಾಗಿ ಕಾಫಿನಾಡು ಚಿಕ್ಕಮಗಳೂರು ಹಾಗೂ ಕೊಡಗು ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಮಳೆಯಿಂದ … Continue reading ವರುಣಾರ್ಭಟ: ಇಂದು ಈ ಐದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ