ವಾಣಿಜ್ಯ ತೆರಿಗೆ ಪರಿವೀಕ್ಷಕರ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಹೊಸಪೇಟೆ : ಜನವರಿ 20 ರಿಂದ ಜನವರಿ 21ರವರೆಗೆ ನಡೆಯುವ ವಾಣಿಜ್ಯ ತೆರಿಗೆ ಪರಿವೀಕ್ಷಕರ ಗ್ರೂಪ್ ಸಿ ಹುದ್ದೆಯ ನೇಮಕಾತಿ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಗಳು ಸುಗಮವಾಗಿ ನಡೆಯುವ ದೃಷ್ಟಿಯಿಂದ ಸಿಆರ್‌ಪಿಸಿ ಕಾಯಿದೆ 1973ರ ಕಲಂ 144ರನ್ವಯ ಪ್ರದತ್ತವಾದ ಅಧಿಕಾರ ಮೇರೆಗೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು ಪರೀಕ್ಷಾ ಕೇಂದ್ರಗಳ ಸುತ್ತಲು ಝರಾಕ್ಸ್ ಮತ್ತು ಕಂಪ್ಯೂಟರ್ ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಈ ಪ್ರದೇಶದಲ್ಲಿ ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರದೇಶ ನಿಷೇಧಿಸಿದೆ. ಈ ಆದೇಶವು ಪರೀಕ್ಷಾ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.