Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿಗಳ ಮುಂದೆ ಬೆತ್ತಲಾಗಿ ಮಲಗಿದ ಮುಖ್ಯೋಪಾಧ್ಯಾಯ

ಉತ್ತರಪ್ರದೇಶ: ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರು ಮದ್ಯದ ಅಮಲಿನಲ್ಲಿ ವಿದ್ಯಾರ್ಥಿಗಳ ಮುಂದೆ ನಗ್ನವಾಗಿ ಮಲಗಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ವಿಶೇಶ್ವರ್‌ಗಂಜ್ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದುರ್ಗಾ ಪ್ರಸಾದ್ ಜೈಸ್ವಾಲ್ ಎಂಬಾತನನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಈತ ಹಲವು ಬಾರಿ ಈ ರೀತಿಯ ಕೃತ್ಯ ಮಾಡಿದ್ದು ವಿದ್ಯಾರ್ಥಿನಿಯರು ಶಾಲೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಇತ್ತೀಚಿಗೆ ಆತ ನಗ್ನವಾಗಿ ಮಲಗಿದ್ದ ವಿಡಿಯೋವೊಂದು ವೈರಲ್ ಆದ ಬಳಿಕ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.