Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿದ್ಯಾರ್ಥಿ ನಿಲಯ ಪ್ರವೇಶಾತಿ; ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

 

ಹೊಸಪೇಟೆ: 2023-24ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕೆ.ಬಿ.ರಾಮಚಂದ್ರಪ್ಪ ಅವರು ತಿಳಿಸಿದ್ದಾರೆ.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕೆ ಬಯಸುವ ಅರ್ಹ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಪದವಿ ಮತ್ತು ಸ್ನಾತ್ತಕೋತ್ತರ ಪದವಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳ ಪೋಷಕರ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ. ಮೀರಿರಬಾರದು, ವಿದ್ಯಾರ್ಥಿಗಳು https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅ.11ರೊಳಗೆ ಅರ್ಜಿ ಸಲ್ಲಿಸಬೇಕು, ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https://bcwd.karnataka.gov.in/-   ನಲ್ಲಿ ನೋಡಬಹುದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ [email protected] ಇ-ಮೇಲ್ ಮೂಲಕ ಅಥವಾ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ. ಸಹಾಯವಾಣಿ 8050770005 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.