ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಮೃತ್ಯು
ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ನ ಕಾಡುಗೋಡಿಯಲ್ಲಿ ನಡೆದಿದೆ.
ತಾಯಿ ಸೌಂದರ್ಯ ಹಾಗೂ ಮಗಳು ಲೀಲಾ ಸಾವನ್ನಪ್ಪಿದ ದುರ್ದೈವಿಗಳು. ಇಂದು ಬೆಳಗಿನ ಜಾವ 5 ಗಂಟೆ ವೇಳೆಗೆ ದುರ್ಘಟನೆ ನಡೆದಿದೆ. ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ್ದಾರೆ.
ತಾಯಿ ಹಾಗೂ ಮಗಳು ತಮಿಳುನಾಡಿನಿಂದ ಬೆಂಗಳೂರಿನ ಮನೆಗೆ ಬರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.