ವಿಪಕ್ಷ ನಾಯಕ ಆರ್ ಅಶೋಕ್ ವಿರುದ್ಧ ಮಧು ಬಂಗಾರಪ್ಪ ಹೇಳಿದ್ದು ಹೀಗೆ.!
ಶಿವಮೊಗ್ಗ: ರಾಜ್ಯದ ಖಜಾನೆಯಲ್ಲಿ ದುಡ್ಡು ಇದ್ದು ಏನೂ ಕೊರತೆ ಇಲ್ಲ. ಬಿಜೆಪಿಯವರು ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಅವರು ಗುಡುಗಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿ, ಬರೀ ಮಾತನಾಡುವುದೇ ಬಿಜೆಪಿಯವರ ಕೆಲಸವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಅಂತಾ ವಿಪಕ್ಷ ನಾಯಕ ಆರ್ ಅಶೋಕ್ ಅವರು ಹೇಳುತ್ತಾರೆ.
ಅಶೋಕ್, ಡಿಸಿಎಂ ಆಗಿದ್ದವರು. ಅವರಿಗೆ ಅನುಭವಿದ್ದು, ಸರ್ಕಾರ ಬೀಳಿಸುವ ಮಾತಿನ ಬದಲು ಸರ್ಕಾರಕ್ಕೆ ಒಳ್ಳೆಯ ಸಲಹೆ ನೀಡಲಿ ಎಂದು ಕಿವಿ ಹಿಂಡಿದ್ದಾರೆ.