Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಮಾನದಲ್ಲೇ ರಕ್ತ ವಾಂತಿ ಮಾಡಿ ಪ್ರಯಾಣಿಕ ಮೃತ್ಯು – ತುರ್ತು ಭೂಸ್ಪರ್ಶ

ಮುಂಬೈಯಿಂದ ರಾಂಚಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರು ರಕ್ತ ವಾಂತಿ ಮಾಡಿ ಮೃತ ಪಟ್ಟಿದ್ದು, ನಾಗ್ಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಲಾಗಿದೆ.

ಮುಂಬೈನಿಂದ ರಾಂಚಿಗೆ ಸೋಮವಾರ ರಾತ್ರಿ 8 ಗಂಟೆ ಸುಮಾರಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ದೇವಾನಂದ್ ತಿವಾರಿ ಎಂಬುವರು ರಕ್ತ ವಾಂತಿ ಮಾಡಿಕೊಳ್ಳಲು ಆರಂಭಿಸಿದ್ದಾರೆ, ಕೂಡಲೇ ಸಿಬ್ಬಂದಿಗಳು ವಿಮಾನಯಾನ ಸಂಸ್ಥೆಗೆ ಮಾಹಿತಿ ನೀಡಿ ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಿ ಪ್ರಯಾಣಿಕನನ್ನು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಈ ವೇಳೆ ತಪಾಸಣೆ ನಡೆಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ಹೇಳಿದ್ದಾರೆ.

ಇನ್ನು ದೇವಾನಂದ್ ಈ ಮೊದಲು ಕ್ಷಯ ರೋಗದಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದ್ದು, ಇದೆ ಕಾರಣದಿಂದ ಅವರು ಮೃತಪಟ್ಟಿರಬಹುದು ಎಂದು ಹೇಳಾಗುತ್ತಿದೆ.