Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಮಾನದೊಳಗೆ ಬೀಡಿ ಸೇದಿದ ಪ್ರಯಾಣಿಕ: ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಕೊಲ್ಕೊತ್ತಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಧೂಮಪಾನ ಮಾಡಿದ್ದ ಆರೋಪದಲ್ಲಿ ಜಿ ಕರುಣಾಕರನ್‌ ಎಂಬ ಪ್ರಯಾಣಿಕನನ್ನು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 3 ರ ರಾತ್ರಿ 9.11 ಕ್ಕೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿದೆ. ಈ ವೇಳೆ ಪ್ರಯಾಣಿಕರು ಸುಟ್ಟ ವಾಸನೆ ಬರುತ್ತಿರುವುದಾಗಿ ಸಿಬ್ಬಂದಿಯ ಗಮನಕ್ಕೆ ತಂದಿದ್ದರು.

ಕೂಡಲೇ ಪರಿಶೀಲಿಸಿದಾಗ ಕುರುಣಾಕರಣ್‌ ವಿಮಾನದ ಶೌಚಾಲಯದೊಳಗೆ ಬೀಡಿ ಸೇದುತ್ತಿರುವುದು ಕಂಡುಬಂದಿದ್ದು,ಕರುಣಾಕರನ್ ತಕ್ಷಣವೇ ಅರ್ಧ ಸೇದಿದ ಬೀಡಿಯನ್ನು ಶೌಚಾಲಯದೊಳಗೆ ಹಾಕಿ ಫ್ಲೆಶ್​ ಮಾಡಲು ಯತ್ನಿಸಿದರು ಎಂದು ಎಫ್ಐಆರ್​​ನಲ್ಲಿ ದಾಖಲಿಸಲಾಗಿದೆ.

ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್‌ ಆದ ಕೂಡಲೇ ಆತನನ್ನು ಬಂಧಿಸಲಾಗಿದೆ.