Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಿಮಾನ ನಿಲ್ದಾಣದಲ್ಲಿ ಕೋಟ್ಯಂತರ ಮೌಲ್ಯದ ಚಿನ್ನ, ಡ್ರಗ್ಸ್ ವಶಕ್ಕೆ..!

 

ಚೆನ್ನೈ; ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಮಲೇಷ್ಯಾ ಹಾಗೂ ಥೈಲ್ಯಾಂಡಿನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ಮೌಲ್ಯದ ಡ್ರಗ್ಸ್, ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ‍

4.5 ಕೋಟಿ ಮೌಲ್ಯದ ಚಿನ್ನ, 15.5 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಮೂವರು ಮಹಿಳೆಯರನ್ನೂ ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.