Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ

ಚಿತ್ರದುರ್ಗ: ವೀರಶೈವ ಲಿಂಗಾಯತ ಜಾತಿ ಹಾಗೂ ಉಪ ಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-3ಬಿ) ಅಭಿವೃದ್ದಿಗಾಗಿ 2023-24ನೇ ಸಾಲಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ  ಯೋಜನೆಗಳಲ್ಲಿ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶೈಕ್ಷಣಿಕ ಸಾಲ ಯೋಜನೆಗಳು, ಜೀವಜಲ ಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‍ಗಳ ಸಹಯೋಗದೊಂದಿಗೆ) ಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು, ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು, ಒಂದು ಕಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ, ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು, ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08194-220882 ಗೆ ಸಂಪರ್ಕಿಸಬುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಇ. ಸಂಪತ್‍ಕುಮಾರ್  ತಿಳಿಸಿದ್ದಾರೆ.