Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!

ದಾವಣಗೆರೆ: ವೀರಶೈವ- ಲಿಂಗಾಯತ ಬೇರೆ ಬೇರೆ ಅನ್ನೋದು ಬಿಡಿ, ವಿರಕ್ತರನ್ನು ಒಂದುಗೂಡಿಸಿ ಗಟ್ಟಿಯಾಗಿ ಹೋರಾಟ ಮಾಡಿದರೆ ವೀರಶೈವ- ಲಿಂಗಾಯತ ಸ್ವತಂತ್ರ್ಯ ಧರ್ಮ ಆಗೇ ಆಗುತ್ತದೆ ಎಂದು ಎಂಎಲ್ಸಿ ಜಗದೀಶ್ ಶೆಟ್ಟರ್ ತಿಳಿಸಿದರು.

ದಾವಣಗೆರೆಯಲ್ಲಿ ಮಾತನಾಡಿ, ಹಲವು ರಾಜ್ಯಗಳಲ್ಲಿ ಸಮುದಾಯದ ಜನರಿದ್ದಾರೆ. ಕರ್ನಾಟಕದಲ್ಲಿ ಸಮಾಜ ಬಲಾಡ್ಯವಾಗಿದೆ. ಈ ನಿಟ್ಟಿನಲ್ಲಿ ಮಹಾಸಭಾ ಗಟ್ಟಿ ನಿರ್ಧಾರ ಮಾಡಿ ಮುನ್ನುಗ್ಗಬೇಕು. ಇದು ನೆರವೇರಿದರೆ ಯುವಕರಿಗೆ ಭವಿಷ್ಯದಲ್ಲಿ ಸಾಕಷ್ಟು ಅನುಕೂಲವಾಗಲಿದೆ ಎಂದರು.