ಶಸ್ತ್ರಚಿಕಿತ್ಸೆಗೆ ಸಹಾಯಧನ ಹಾಗೂ ವಿದ್ಯಾರ್ಥಿ ಪ್ರೋತ್ಸಾಹ ಧನ ಮಂಜೂರಾತಿ ಅರ್ಜಿ ಆಹ್ವಾನ
ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ ಎಸ್.ಎಫ್.ಸಿ ನಿಧಿಯಡಿ 2023-24ನೇ ಸಾಲಿಗೆ ಕ್ರಿಯಾ ಯೋಜನೆ ತಯಾರಿಸಲು ಅವಕಾಶ ಕಲ್ಪಿಸಲಾಗಿದೆ.
ಶೇ5 ಯೋಜನೆಯಡಿ ಯಶಸ್ವಿನಿ ಯೋಜನೆಗೆ ಒಳಪಟ್ಟ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದವರು ಒಂದು ಬಾರಿ ಸಹಾಯಧನ ಪಡೆಯಲು ಹಾಗೂ ಎಸ್.ಎಸ್.ಎಲ್.ಸಿ ವ್ಯಾಸಂಗ ಮಾಡುತ್ತಿರು ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಅರ್ಜಿಸಲ್ಲಿಸಬಹುದು.
ಶೇ.7.25 ಯೋಜನೆಯಡಿ ಪಿಯುಸಿ, ಪ್ಯಾರಮೆಡಿಕಲ್, ಡಿಪ್ಲೋಮೋ, ಡಿ.ಇಡಿ, ಸಿ.ಪಿ.ಇಡಿ, ಬಿ.ಎಡ್ ಸೇರಿದಂತೆ ಎಲ್ಲಾ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.chitradurgacity.mrc.gov.in ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.