Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶಿವಮೊಗ್ಗ ಜಿಲ್ಲೆಗೆ ​30 ದಿನ ಬಾರದಂತೆ ಪ್ರಮೋದ್ ಮುತಾಲಿಕ್​ಗೆ ನಿರ್ಬಂಧ

ಶಿವಮೊಗ್ಗ: ಅಕ್ಟೋಬರ್ 17 ರಿಂದ ​30 ದಿನಗಳ ಕಾಲ ಶಿವಮೊಗ್ಗಕ್ಕೆ ಭೇಟಿ ನೀಡದಂತೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

ಪ್ರಮೋದ್ ಮುತಾಲಿಕ್​ ಅ.17ರ ರಾತ್ರಿ ಮಂಗಳೂರಿನಿಂದ ಶಿವಮೊಗ್ಗಕ್ಕೆ ಹೊರಟ್ಟಿದ್ದರು. ಆದರೆ ದಾರಿ ಮಧ್ಯೆ ಪೊಲೀಸರು ತಡೆದು, ನಿರ್ಬಂಧಿಸಿದ ನೋಟಿಸ್ ನೀಡಿದರು.

ಈ ಕುರಿತು ಮಾತನಾಡಿದ ಪ್ರಮೋದ ಮುತಾಲಿಕ್,​ ಇತ್ತೀಚೆಗೆ ಗಲಾಟೆ ನಡೆದ ಶಿವಮೊಗ್ಗದ ರಾಗಿಗುಡ್ಡ ಭೇಟಿ ನೀಡಲು ಮಂಗಳೂರಿನಿಂದ ಹೊರಟ್ಟಿದ್ದೆ. ಆದರೆ ಪೊಲೀಸರು ಮಾಸ್ತಿಕಟ್ಟೆ ಬಳಿ ತಡೆದು, ನನ್ನನ್ನು ವಶಕ್ಕೆ ಪಡೆದುಕೊಂಡು ದಾವಣಗೆರೆಗೆ ತಂದು ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ನನ್ನ ಭೇಟಿಗೆ ನಿರ್ಬಂಧ ವಿಧಿಸಿರುವ ಬಗ್ಗೆ ಕೋರ್ಟ್​ ಮೊರೆ ಹೋಗುತ್ತೇನೆ. ರಾಗಿಗುಡ್ಡದ ಸಂತ್ರಸ್ತ ಹಿಂದುಗಳಿಗೆ ಸಾಂತ್ವನ ಹೇಳುವುದು ನನ್ನ ಉದ್ದೇಶ. ಆದರೆ ನನ್ನನ್ನು ತಡೆದು ಪೊಲೀಸರು ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ.