Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಶಿವಾಜಿನಗರ ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ

ಬೆಂಗಳೂರು: ಬೆಂಗಳೂರಿನ ಶಿವಾಜಿನಗರ ಮಸೀದಿಯಲ್ಲಿ ಬಾಂಬ್ ಇಡಲಾಗಿದೆ ಎಂದು ರಾತ್ರಿ 11 ಗಂಟೆಗೆ ಬೆದರಿಕೆ ಕರೆ ಬಂದಿದೆ.

ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಕರೆ ಮಾಡಿದ ಅಪರಿಚಿತ ವ್ಯಕ್ತಿ ಶಿವಾಜಿನಗರದ ಆಜಂ ಮಸೀದಿಗೆ ಬಾಂಬ್ ಇಟ್ಟಿದ್ದಾರೆ ಎಂದು ಹೇಳಿದ್ದಾನೆ. ಮಸೀದಿಯಲ್ಲಿ ಉಗ್ರರು ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿ ಕರೆ ಮಾಹಿತಿ ನೀಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಡೌಡಾಯಿಸಿದ ಶಿವಾಜಿನಗರ ಠಾಣೆ ಪೋಲೀಸರು ಪರಿಶೀಲನೆ ನಡೆಸಿದ್ದಾರೆ.

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಇನ್ಮುಂದೆ ಮೂರನೇ ಶನಿವಾರ ‘ಬ್ಯಾಗ್‌ ರಹಿತ’ ದಿನವಾಗಿ ಆಚರಣೆ

ಹಿರಿಯ ಅಧಿಕಾರಿಗಳ ಸಹಿತ ಭೇಟಿ ನೀಡಿ ಸ್ಥಳ ಪಡಿಶೀಲನೆ ನಡೆಸಿದ್ದಾರೆ. ಮಸೀದಿ ಪರಿಶೀಲನೆ ಬಳಿಕ ಹುಸಿಬಾಂಬ್ ಕರೆ ಇದಾಗಿದೆ ಎಂದು ಗೊತ್ತಾಗಿದೆ. ಆತಂಕಕ್ಕೆ ಒಳಗಾಗಿದ್ದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಕರೆ ಮಾಡಿದ ಅಪರಿಚಿತ ವ್ಯಕ್ತಿಗಾಗಿ ಶಿವಾಜಿನಗರ ಠಾಣೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.