Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ’ – ಎಲಾನ್ ಮಸ್ಕ್‌

ನ್ಯೂಯಾರ್ಕ್: ನಾನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಟೆಸ್ಲಾ ಸಿಇಒ ಮತ್ತು ಟ್ವಿಟ್ಟರ್ ಮಾಲೀಕ ಎಲಾನ್ ಮಸ್ಕ್ ಹೇಳಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಮೋದಿಯವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಈ ಭೇಟಿ ನನಗೆ ರೋಮಾಂಚನಕಾರಿ ಅನುಭವ ನೀಡಿದೆ. ಅವರು ಕೆಲವು ವರ್ಷಗಳ ಹಿಂದೆ ನಮ್ಮ ಕಾರ್ಖಾನೆಗೆ ಭೇಟಿ ನೀಡಿದ್ದರು. ಇದರಿಂದಾಗಿ ಅವರ ಬಗ್ಗೆ ನನಗೆ ತಿಳಿದಿದೆ. ಅವರು ನನಗೆ ಭಾರತಕ್ಕೆ ಆಮಂತ್ರಣ ನೀಡಿದ್ದಾರೆ. ಶೀಘ್ರದಲ್ಲೇ ನಾನು ಭಾರತಕ್ಕೆ ಭೇಟಿ ನೀಡಲಿದ್ದೇನೆ ಎಂದಿದ್ದಾರೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಮಸ್ಕ್ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. 2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಟೆಸ್ಲಾ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿರುವ ಕಾರಣ ಭಾರತದಲ್ಲಿ ಇನ್ನೂ ಟೆಸ್ಲಾ ಕಾರು ಬಿಡುಗಡೆಯಾಗಿಲ್ಲ. ಇದು ಭಾರತದ ಅಭಿವೃದ್ಧಿಗೆ ಸಹಕಾರವಾಗಲಿದೆ. ಇದೇ ವರ್ಷದಲ್ಲಿ ಟೆಸ್ಲಾ ಕಾರ್ಖಾನೆಯನ್ನು ಭಾರತದಲ್ಲಿ ಸ್ಥಾಪಿಸಲು ಸ್ಥಳವನ್ನು ಗುರುತಿಸುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.