ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮತ್ತು ಅಳಿಯನ ಕೊರಳಲ್ಲಿ ಹುಲಿ ಉಗುರು ಮಾದರಿ ಪೆಂಡೆಂಟ್
ಬೆಳಗಾವಿ :ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ 10 ಸ್ಪರ್ಧಿ ವರ್ತೂರ ಸಂತೋಷ್ ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಸಿನೆಮಾ ನಟರು ಸ್ವಾಮಿಜಿ ಹಾಗೂ ರಾಜಕೀಯ ಮುಖಂಡರಿಗೂ ಸಂಕಷ್ಟ ತಂದೊಡ್ಡಿದೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸಂತೋಷ್ ಬಂಧನವಾಯ್ತು, ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.
ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ. ಲಕ್ಷ್ಮೀ ಹೆಬ್ಬಾಳಕ್ ಅವರ ಮಗನ ಪೋಟೋ ಕೂಡ ವೈರಲ್ ಆಗಿದೆ.