ಸಚಿವ ದಿನೇಶ್ ಗುಂಡೂರಾವ್ ರಿಂದ ಬೆಂಗಳೂರು ಕಂಬಳ ಕರೆ ವೀಕ್ಷಣೆ
ಪುತ್ತೂರು: ನ.24,25 ಮತ್ತು 26 ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕರೆ ನಿರ್ಮಾಣ ಕಾಮಗಾರಿಯನ್ನು ದ ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ವೀಕ್ಷಣೆ ಮಾಡಿದರು.
ಶುಕ್ರವಾರ ಮಧ್ಯಾಹ್ನ ಅರಮನೆ ಮೈದಾನಕ್ಕೆ ಭೇಟಿ ನೀಡಿದ ಅವರು ಕರೆ ವೀಕ್ಷಣೆ ಮಾಡಿ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ , ಪುತ್ತೂರು ಶಾಸಕರಾದ ಅಶೋಕ್ ರೈ ಜೊತೆ ಚರ್ಚೆ ನಡೆಸಿದರು. ಕಂಬಳ ವೀಕ್ಷಣೆಗೆ ಲಕ್ಷಾಂತರ ಮಂದಿ ಅಭಿಮಾನಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಲ್ಲಿ ನಡೆಯುತ್ತಿರುವ ಇತರೆ ಕಾಮಗಾರಿಗಳನ್ನು ಸಚಿವರು ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಕಂಬಳ ಸಮಿತಿ ಅಧ್ಯಕ್ಷರೂ , ಪುತ್ತೂರು ಶಾಸಕರೂ ಆದ ಅಶೋಕ್ ರೈ, ಮಾಜಿ ಕಾರ್ಪೋರೇಟರ್ ಉಮೇಶ್ ಶೆಟ್ಟಿ, ಪ್ರಮುಖರಾದ ಗುಣರಂಜನ್ ಶೆಟ್ಟಿ, ಮುರಳೀದರ್ ರೈ ಮಠಂತಬೆಟ್ಟು ಸೇರಿದಂತೆ ಕಂಬಳ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.