Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ’ರಹಸ್ಯ ಸಭೆ’

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಗೆ ಹೋಗಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿನ್ನೆ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ.

ಭೋಜನಕೂಟದ ನೆಪದಲ್ಲಿ ತಮ್ಮ ನಿವಾಸದಲ್ಲಿ ಪರಿಶಿಷ್ಟ ಜಾತಿಯ ಪ್ರಭಾವಿಗಳಾದ ಡಾ.ಜಿ.ಪರಮೇಶ್ವರ್‌ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಹಾಗೂ ಪರಿಶಿಷ್ಟ ಪಂಗಡದ ಸತೀಶ್‌ ಜಾರಕಿಹೊಳಿ ಅವರು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ರಾತ್ರಿ 9 ಗಂಟೆಯಿಂದ 11 ಗಂಟೆಯವರೆಗೆ ಮಾತುಕತೆ ನಡೆದಿದೆ. ಸತೀಶ್ ಜಾರಕಿಹೊಳಿ ಡಿಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ.ಮೂರು ಡಿಸಿಎಂ ಹುದ್ದೆ ಸೃಷ್ಟಿಗೆ ಪಟ್ಟು ಹಿಡಿದಿದ್ದಾರೆ.ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದರು.

3 ಡಿಸಿಎಂ ಹುದ್ದೆಗಳಿಂದ ಲೋಕಸಭಾ ಚುನಾವಣೆಯಲ್ಲಿ ಸುಲಭವಾಗಿ ಗೆಲ್ಲಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ‌.