‘ಸತ್ತು ಹೋಗಿದ್ದೇನೆ ಎಂದು ನಂಬಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಅರೆಸ್ಟ್’!
ಬೆಂಗಳೂರು: ಸತ್ತು ಹೋಗಿದ್ದೇನೆ ಎಂದು ಎಲ್ಲರನ್ನೂ ನಂಬಿಸಿ ಎರಡು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ರೌಡಿ ಶೀಟರ್, ಕೊಲೆ ಆರೋಪಿಯನ್ನು ಬಂಧಿಸಲಾಗಿದೆ.
ವೈಟ್ ಫೀಲ್ಡ್ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿರುವ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಬಂಧಿತ ಆರೋಪಿಯಾಗಿದ್ದಾನೆ.
ಎರಡು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಈತ ಎರಡು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ. ಕುಟುಂಬಸ್ಥರು, ಗೆಳೆಯರು, ಪರಿಚಿತರನ್ನು ವಿಚಾರಿಸಿದಾಗ ಈತ ಸತ್ತು ಹೋಗಿದ್ದಾನೆ ಎಂಬ ಮಾಹಿತಿ ನೀಡಿದ್ದರು. ಇದಕ್ಕೆ ಬೇಕಾದ ದಾಖಲೆಗಳನ್ನು ಸಹ ಕುಟುಂಬಸ್ಥರು ತಯಾರಿಸಿಕೊಂಡಿದ್ದರು.
ಅದರೂ ಅನುಮಾನ ಮೇಲೆ ಸಿಸಿಬಿ ಪೊಲೀಸರು ಈತನ ಪತ್ತೆಗಾಗಿ ಕಾರ್ಯಾಚರಣೆ ಶುರು ಹಚ್ಚಿಕೊಂಡಿದ್ದರು. ಕೊನೆಗೆ ಊರೂರು ಸುತ್ತುತ್ತಾ ತಲೆಮರೆಸಿಕೊಂಡಿದ್ದ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಿ ಸಿಕ್ಕಿಬಿದ್ದಿದ್ದಾನೆ.
ಕಾಡುಬೀಸನಹಳ್ಳಿ ಸೋಮನ ಡ್ರೈವರ್ ಕೊಲೆ ಹಾಗೂ ರಾಜಾನುಕುಂಟೆಯಲ್ಲಿ ಇನ್ನೊಂದು ಕೊಲೆ ಕೇಸಿನಲ್ಲಿಯೂ ರೌಡಿಶೀಟರ್ ಮಲ್ಲಿಕಾರ್ಜುನ ಆರೋಪಿಯಾಗಿದ್ದ.