Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೆ – ಕಾನೂನಿನ ಕೈಗಳಿಗೆ ಇನ್ನಷ್ಟು ಬಲ -ಸಿಎಂ ಟ್ವಿಟ್‌

ಬೆಂಗಳೂರು: ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ. ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಈ ಕುರಿತು ಟ್ವಿಟ್‌ ಮಾಡಿದ ಅವರು, ಹತ್ಯೆ, ಅಪಹರಣ ಮುಂತಾದ ಅಪರಾಧ ಕೃತ್ಯಗಳು ದುರದೃಷ್ಟಕರ. ಆದರೆ ಒಂದು ಸರ್ಕಾರವಾಗಿ ಇಂಥ ಕಾನೂನು ವಿರೋಧಿ ಕೃತ್ಯಗಳು ನಡೆಯದಂತೆ ತಡೆಯಲು ನಾವು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇವೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಗೊಳಿಸುವುದು ನಮ್ಮ ಮೊದಲ ಆದ್ಯತೆ.ಇದಕ್ಕಾಗಿ ಕಾನೂನಿನ ಕೈಗಳಿಗೆ ಇನ್ನಷ್ಟು ಬಲ ನೀಡಲಾಗುವುದು. ಈ ಮೂಲಕ ವಿರೋಧ ಪಕ್ಷಗಳ ಆರೋಪಕ್ಕೆ ಪರೋಕ್ಷವಾಗಿ ಉತ್ತರಿಸಿದ್ದಾರೆ.

ದುಡ್ಡಿನ ವ್ಯವಹಾರದ ಕಾರಣಕ್ಕಾಗಿ ನಡೆದಿದೆ ಎನ್ನಲಾದ ಜೈನಮುನಿ ಕಾಮಕುಮಾರ ನಂದಿ ಮಹರಾಜರ ಹತ್ಯೆಯ ಆರೋಪಿಗಳನ್ನು ಕೊಲೆ ನಡೆದ 6 ಗಂಟೆಗಳ ಒಳಗೆ ಬಂಧಿಸಲಾಗಿದೆ. ಅಲ್ಲದೇ ವೈಯಕ್ತಿಕ ದ್ವೇಷದ ಕಾರಣಕ್ಕಾಗಿ ಟಿ. ನರಸೀಪುರದ ವೇಣುಗೋಪಾಲ್ ಅವರನ್ನು ಹತ್ಯೆಗೈದ ಆರೋಪಿಗಳನ್ನು ಕೂಡ ಕೊಲೆ ನಡೆದ 24 ಗಂಟೆಯೊಳಗೆ ಬಂಧಿಸಲಾಗಿದೆ. ಬೆಂಗಳೂರಿನ ಏರೋನಿಕ್ಸ್ ಸಂಸ್ಥೆಯ ಎಂ.ಡಿ ಹಾಗೂ ಸಿ.ಇ.ಒ ಹತ್ಯೆಯ ಆರೋಪಿಗಳನ್ನು ಕೂಡ ಕೊಲೆ ನಡೆದ 24 ಗಂಟೆಗಳೊಳಗೆ ಬಂಧಿಸಲಾಗಿದೆ ಎಂದು ತಿಳಿಸಿದರು.

ಈ ಎಲ್ಲಾ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ರಾಜ್ಯದ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ಬಗ್ಗೆ ಯಾವ ಸಂದೇಹವೂ ಬೇಡ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.