Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಸರಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯ.! ನನ್ನ ಹೇಳಿಕೆಗೆ ಸದಾ ಬದ್ಧ: ಶಾಮನೂರು

 

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿರುವುದು ನಿಜ. ಈ ಹೇಳಿಕೆಗೆ ನಾನು ಈಗಲೂ ಬದ್ಧನಿದ್ದೇನೆಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದಲ್ಲಿ ಏಳು ಮಂದಿ ಲಿಂಗಾಯತ ಸಮುದಾಯದ ಸಚಿವರಿದ್ದಾರೆ ಎನ್ನುತ್ತಿದ್ದಾರೆ. ಆದರೆ ನಾನು ಸಚಿವರ ಬಗ್ಗೆ ಮಾತನಾಡುತ್ತಿಲ್ಲ. ಅಧಿಕಾರಿಗಳನ್ನು ಸೂಕ್ತವಾಗಿ ನಡೆಸಿಕೊಳ್ಳುತ್ತಿಲ್ಲ. ಹಾಗಾಗಿಯೇ ಈ ವಿಚಾರ ಹೊರಗೆ ಬಂದಿದೆ ಎಂದಿದ್ದಾರೆ.