ಸರ್ಕಾರದ ಸಂವಿಧಾನ ದಿನಾಚರಣೆಯಲ್ಲಿ ಶಾಸಕ ಬಸವಂತಪ್ಪ ಭಾಗಿ
ದಾವಣಗೆರೆ: ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಸಂವಿಧಾನ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಭಾಗವಹಿಸಿ ದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹಾದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಕಮಿಷನರ್ ರಾಕೇಶ್ ಸೇರಿದಂತೆ ಅಧಿಕಾರಿಗಳು ಭಾಗವಹಿಸಿದ್ದರು.