‘ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ’ – ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು: ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ. ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ನಡೆಯುತ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅಮಿತ್ ಶಾ ಅವರನ್ನು ಮೀಟ್ ಮಾಡಿಸುತ್ತೇವೆ. 50 ಕೋಟಿ ರೂಪಾಯಿ ಕೊಡುತ್ತೇವೆ ಅಂತಾ ಹೇಳಿ ಅಮಿಷ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪ ಮಾಡಿರುವ ವಿಚಾರವಾಗಿ ಸಿದ್ದರಾಮಯ್ಯ ಮಾತನಾಡಿ, ಆಪರೇಷನ್ ಕಮಲ ಬಗ್ಗೆ ನನಗೆ ಗೊತ್ತಿಲ್ಲ, ರವಿ ಗಣಿಗ ಜತೆ ಮಾತನಾಡಿಲ್ಲ ಎಂದರು.
ಇನ್ನು ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನ ಆಗ್ತಿದೆ ಅಂತಾ ಮಾಹಿತಿ ಇತ್ತು. ಆದರೆ ಬಿಜೆಪಿಯವರಿಗೆ ಅದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.